ಮಂಗಳೂರು ಜುಲೈ 05 : ಬಜಪೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಗ್ರಾಮ ಪಂಚಾಯತ್ ಮಂಗಳೂರು ಇದರ ಸಹಯೋಗದಲ್ಲಿ ದ.ಕ ಜಿಲ್ಲೆ, ಮಂಗಳೂರು ತಾಲೂಕು, ಬಜಪೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಪೆ ಬಸ್ ನಿಲ್ದಾಣಕ್ಕೆ ಕಾಂಕ್ರೀಟ್ ಆವರಣ ನಿರ್ಮಾಣ ಕಾಮಗಾರಿಯನ್ನು ಜುಲೈ 6 ರಂದು ಬೆಳಿಗ್ಗೆ 10 ಗಂಟೆಗೆ ಬಜಪೆ ಗ್ರಾಮ ಪಂಚಾಯತ್ ಕಚೇರಿ ಬಳಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರು ಉದ್ಘಾಟಿಸಲಿದ್ದಾರೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಘನ ಉಪಸ್ಥಿತಿಯಲ್ಲಿದ್ದು, ಮೂಡಬಿದಿರೆ ಶಾಸಕ ಉಮಾನಾಥ್ ಎ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.
Comments are closed.