ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಕೊರೊನಾಕ್ಕೆ 9ನೇ ಬಲಿ-ಬೈಂದೂರು ಕಿರಿಮಂಜೇಶ್ವರದ ವ್ಯಕ್ತಿ ಸಾವು

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ಸೋಂಕಿಗೆ ಮತ್ತೊಂದು ಸಾವು ಸಂಭವಿಸಿದೆ. ಕುಂದಾಪುರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಂದೂರು ತಾಲೂಕು ಕಿರಿಮಂಜೇಶ್ವರ ಮೂಲದ 80 ವರ್ಷದ ವ್ಯಕ್ತಿ ಮೃತಪಟ್ಟವರು.

ತೀವ್ರ ಉಸಿರಾಟ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಶುಕ್ರವಾರ ಸಾವನ್ನಪ್ಪಿದ್ದಾರೆ.

ಕೋವಿಡ್‌ ಮಾರ್ಗಸೂಚಿಯಂತೆ ಕುಂದಾಪುರದಲ್ಲಿ ಅಂತಿಮ ಸಂಸ್ಕಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ 19 ಕಾರಣದಿಂದ ಮೃತ ಪಟ್ಟವರ ಸಂಖ್ಯೆ 9ಕ್ಕೇರಿದೆ.

Comments are closed.