ಕರಾವಳಿ

ಕಾರಂತ ಥೀಮ್ ಪಾರ್ಕ್‌ಗೆ ಮುಖ್ಯ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಭೇಟಿ

Pinterest LinkedIn Tumblr

ಕುಂದಾಪುರ: ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪ್ರೀತಿ ಗೆಹ್ಲೋಟ್ ಅವರು ಭೇಟಿ ನೀಡಿದರು. ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ ಆರ್ಟ್ ಗ್ಯಾಲರಿ, ಗ್ರಂಥಾಲಯ ವೀಕ್ಷಿಸಿದರು. ಥೀಮ್ ಪಾರ್ಕ್‌ನಲ್ಲಿನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಂಥಾಲಯವನ್ನು ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಈ-ಗ್ರಂಥಾಲಯ ಮಾಡುವ ಬಗ್ಗೆ ಸಹಕಾರ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಶ್ರೀಮತಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ| ಅರುಣ್ ಕುಮಾರ್ ಶೆಟ್ಟಿ, ಪಿ.ಡಿ.ಓ ಶ್ರೀಮತಿ ಶೈಲಾ ಎಸ್ ಪೂಜಾರಿ, ಕಾರಂತ ಪ್ರತಿಷ್ಠಾನ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟ ಕಂದಾಯ ನಿರೀಕ್ಷಕ ಶ್ರೀ ರಾಜು, ವಿ.ಎ ಚೆಲುವರಾಜು, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Comments are closed.