ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಗುರುವಾರ 160 ಕೊರೋನಾ ಪಾಸಿಟಿವ್ ಪ್ರಕರಣ ದೃಢ; ಓರ್ವ ಮಹಿಳೆ ಸಾವು

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು ಗುರುವಾರ 160 ಮಂದಿಯಲ್ಲಿ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. 70 ವರ್ಷದ ಮಹಿಳೆಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಗುರುವಾರ ಮತ್ತೆ 160 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 70ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹನ್ನೆರಡಕ್ಕೆ ಏರಿಕೆಯಾಗಿದೆ.

ಬ್ರಹ್ಮಾವರ ತಾಲೂಕಿನ 70 ವರ್ಷದ ಮಹಿಳೆಯಲ್ಲಿ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಉಡುಪಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಬುಧವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ.

Comments are closed.