ಕರಾವಳಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋಸಾಗಾಟಗಾರರಿಗೆ ಸೂಕ್ತ ಭದ್ರತೆ ಒದಗಿಸಲು ಎಸ್.ಡಿ.ಪಿ.ಐ ಆಗ್ರಹ

Pinterest LinkedIn Tumblr

ಮಂಗಳೂರು : ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವು ಇದೇ ಬರುವ ತಾರೀಖು 31-07-2020 ಶುಕ್ರವಾರದಂದು ಸರ್ಕಾರ ಮತ್ತು ಆರೋಗ್ಯ ಇಲಾಖೆ ನಿರ್ದೇಶಿಸಿದ ರೀತಿಯಲ್ಲಿ ನಡೆಯಲಿದೆ.

ಬಕ್ರೀದ್ ಹಬ್ಬದ ಪ್ರಯುಕ್ತ ಪ್ರಾಣಿ ಬಲಿ ಅರ್ಪಿಸಿ ದಾನ ನೀಡುವುದು ಈ ಹಬ್ಬದ ಪ್ರಮುಖ ಅಂಶವಾಗಿ ದೆ.   ಆದರೆ ಇತ್ತೀಚಿನಿಂದ ಜಿಲ್ಲಾದ್ಯಂತ ಪಶು ಸಂಗೋಪನೆ ಇಲಾಖೆಯ ಪರವಾನಿಗೆ ಇದ್ದರೂ ದನ ಸಾಗಾಟದ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳಿಂದ ಮಾರಕಾಯುಧಗಳಿಂದ ದಾಳಿ ನಡೆಸುತ್ತಿರುವ ಘಟನೆಗಳು ನಡೆಯುತ್ತಾ ಇದೆ.

ಕಳೆದೊಂದು ತಿಂಗಳಿನಿಂದ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ತಾಲ್ಲೂಕಿನ ಹಲವಾರು ಕಡೆಗಳಲ್ಲಿ ಗೋಸಾಗಾಟಗಾರರನ್ನು ಗುರಿಯಾಗಿಸಿ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ದೊರ್ಜನ್ಯ ನಡೆಸಿದ್ದಾರೆ. ಆದರೆ ಪೋಲಿಸರು ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸದೇ ಇರುವುದರಿಂದ ಅಂತಹ ಘಟನೆಗಳು ಪುನರಾವರ್ತನೆಯಾಗುತ್ತಲೇ ಇದೆ.

ಈಗಾಗಲೇ ನಿರ್ಗಮಿತ ಜಿಲ್ಲಾಧಿಕಾರಿಯವರು ಗೋಸಾಗಾಟಗಾರರ ಮೇಲೆ ದಾಳಿ ನಡೆಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಇದು ಅಭಿನಂದನರ್ಹವಾಗಿದೆ.ಆದರೆ ಇದನ್ನು ಕೇವಲ ಹೇಳಿಕೆಗೆ ಸೀಮಿತಗೊಳಿಸದೆ ಕಾರ್ಯಪ್ರವೃತಗೊಳಿಸಬೇಕು.

ಹಾಗಾಗಿ ಬಕ್ರೀದ್ ಹಬ್ಬದ ಸಂರ‍್ಭದಲ್ಲಿ ಪ್ರಾಣಿ ಬಲಿ ಪ್ರಮುಖ ಅಂಶವಾಗಿರುವುದರಿಂದ ಜಾನುವಾರು ಸಾಗಾಟಗಾರರಿಗೆ ಸೂಕ್ತ ಭದ್ರತೆಯನ್ನು ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ಭದ್ರತೆಯನ್ನು ಒದಗಿಸ ಬೇಕೆಂದು ಎಸ್.ಡಿ.ಪಿ.ಐ ದ.ಕ ಜಿಲ್ಲಾಕಾರ್ಯದರ್ಶಿ ಸಾಹುಲ್ ಎಸ್.ಎಚ್ ಪ್ರಕಟಣೆಯಲ್ಲಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

Comments are closed.