ಕರಾವಳಿ

ಉಡುಪಿಯಲ್ಲಿ ಭಾನುವಾರ 182 ಮಂದಿಗೆ ಕೊರೊನಾ ಸೋಂಕು ದೃಢ

Pinterest LinkedIn Tumblr

ಉಡುಪಿ: ಉಡುಪಿಯಲ್ಲಿ ಭಾನುವಾರ 182 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4672 ಆಗಿದೆ.

ಭಾನುವಾರ 182 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, 625 ವರದಿ ನೆಗೆಟಿವ್‌ ಬಂದಿದೆ. ಇನ್ನು ಕೂಡಾ 616 ವರದಿಗಳು ಇನ್ನು ಲಭ್ಯವಾಗಬೇಕಿದೆ. ಜಿಲ್ಲೆಯಲ್ಲಿ ಇಂದು 50 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1943 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಇಂದು 54 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ವರದಿಯಾಗಿದೆ.

Comments are closed.