ಕರಾವಳಿ

ಗುತ್ತಿಗೆ ಆಧಾರದಲ್ಲಿ ಐವರು ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ

Pinterest LinkedIn Tumblr

ಉಡುಪಿ: ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ವಂಡ್ಸೆ , ಈದು, ಸಮುದಾಯ ಆರೋಗ್ಯ ಕೇಂದ್ರ, ಹೆಬ್ರಿ, ಸಾರ್ವಜನಿಕ ಆಸ್ಪತ್ರೆ, ಕಾರ್ಕಳ ಇಲ್ಲಿ ತೆರವು ಇರುವ 5 ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆಯ , ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯವರನ್ನು ಗುತ್ತಿಗೆ ಆಧಾರದ ಮೇರೆಗೆ ಒಂದು ವರ್ಷ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ/ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾಗುವವರೆಗೆ ( ಯಾವುದು ಮೊದಲೋ ಅಲ್ಲಿಯವರೆಗೆ ) ನೇಮಕಾತಿ ಮಾಡಲು ವೈದ್ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಅಜ್ಜರಕಾಡು ಉಡುಪಿ ಇಲ್ಲಿಂದ ಪಡೆದು, ಆಗಸ್ಟ್ 16 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು. ಸಂದರ್ಶನ ದಿನಾಂಕದಂದು ಖಾಲಿ ಇರುವ ಹುದ್ದೆಗಳಿಗೆ ಮಾತ್ರ ನೇಮಕಾತಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0820-2536650 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆ ತಿಳಿಸಿದೆ.

Comments are closed.