ಕುಂದಾಪುರ: ಕುಂದಾಪುರ ಹೊಸ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಮ್ಮಾಡಿ ಕಟ್’ಬೆಲ್ತೂರು ನಿವಾಸಿ ನಾಗರಾಜ(34), ಕುಂಭಾಸಿ ಕೊರವಡಿ ನಿವಾಸಿ ಆಕಾಶ್ ಎಸ್ ಪೂಜಾರಿ (23) ಬಂಧಿತ ಆರೋಪಿಗಳು.
ಕುಂದಾಪುರ ಕಸಬಾ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ಇಬ್ಬರು ವ್ಯಕ್ತಿಗಳು ಗಾಂಜಾ ಸೇವಿಸುತ್ತಿದ್ದ ಬಗ್ಗೆ ಕುಂದಾಪುರ ಪಿಎಸ್ಐ ಹರೀಶ್ ಆರ್. ಅವರಿಗೆ ದೊರೆತ ಮಾಹಿತಿಯಂತೆ ಸಿಬ್ಬಂದಿಯವರೊಂದಿಗೆ ಲ ಸ್ಥಳಕ್ಕೆ ತೆರಳಿ ನೋಡಲಾಗಿ ಇಬ್ಬರು ವ್ಯಕ್ತಿಗಳು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿದ್ದರಿಂದ ಅವರನ್ನು ಸಿಬ್ಬಂದಿಯವರೊಂದಿಗೆ ಕೆ.ಎಂ.ಸಿ ಮಣಿಪಾಲ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ಮುಂದೆ ಹಾಜರುಪಡಿಸಿ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಆಪಾದಿತರು ಗಾಂಜಾ ಸೇವನೆ ಮಾಡಿರುವುದಾಗಿ ತಜ್ಞರು ವರದಿ ನೀಡಿದ್ದು, ಆಪಾದಿತರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.