ಉಡುಪಿ: ಕೋವಿಡ್-19 ಕರ್ತವ್ಯದಲ್ಲಿದ್ದ ಕೊರೋನಾ ವಾರಿಯರ್ ಮೇಲೆ ಕಾರ್ಕಳದ ಸತ್ಯನಗರ ನಿವಾಸಿ ಪ್ರಶಾಂತ ದೇವಾಡಿಗ ಎಂಬವರು ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಲ್ಲದೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ದೈಹಿಕ ಹಲ್ಲೆ ನಡೆಸಿರುವುದಾಗಿ ಕಾರ್ಕಳ ಪುರಸಭೆಯ ಕರವಸೂಲಿ ಸಿಬಂದಿ ಚಂದ್ರಶೇಖರ ಅವರು ನಗರ ಠಾಣೆಗೆ ದೂರು ನೀಡಿದ್ದಾರೆ.

ಕಾರ್ಕಳ ಪುರಸಭೆಯಲ್ಲಿ ಕರ ವಸೂಲಿ ಕರ್ತವ್ಯ ನಿರ್ವಹಿಸುತ್ತಿರುವ ತಾನು ಮುಖ್ಯಾಧಿಕಾರಿಗಳ ಆದೇಶದಂತೆ ಪುರಸಭೆ ವ್ಯಾಪ್ತಿಯಲ್ಲಿ ಕೋವಿಡ್-19 ಕ್ವಾರಂಟೈನ್ ವಾಚ್ ಆಪ್ ಕೊರೊನಾ ಪಾಸಿಟಿವ್ ಪ್ರಕರಣ, ಹೊರರಾಜ್ಯದಿಂದ ಬಂದ ಸಾರ್ವಜನಿಕರು ಮತ್ತು ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳ ಹೋಂ ಕ್ವಾರಂಟೈನ್ ಮನೆಗಳಿಗೆ ಪ್ರತಿನಿತ್ಯ ಬೇಟಿ ನೀಡಿ ಪೊಟೋಗಳನ್ನು ತೆಗೆದು ಅಪ್ಲೋಡ್ ಮಾಡುತ್ತಿದ್ದೇನೆ.
ಆ.30ರಂದು ಬೆಳಗ್ಗೆ 9ರ ವೇಳೆಗೆ ಸತ್ಯನಾರಾಯಣ ನಗರದ ಕ್ವಾರಂಟೈನ್ನಲ್ಲಿರುವ ಪ್ರಶಾಂತ್ ದೇವಾಡಿಗ, ನಿರ್ಮಲ, ಲಕ್ಷ್ಮಿ ದೇವಾಡಿಗರ ಎಂಬವರ ಮನೆಗೆ ತೆರಳಿದಾಗ ಪ್ರಶಾಂತ ದೇವಾಡಿಗರು ಆಕ್ಷೇಪ ವ್ಯಕ್ತಪಡಿಸಿ, ನಿಮಗೆ ಮಾಡಲು ಬೇರೆ ಕೆಲಸ ಇಲ್ಲವೆ ಎಂಬಿತ್ಯಾದಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Comments are closed.