ಕರಾವಳಿ

ಮಂಗಳವಾರ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ..!

Pinterest LinkedIn Tumblr

ನವದೆಹಲಿ: ರಾಜಸ್ಥಾನ, ಪಂಜಾಬ್‌, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೆ, ಪಂಜಾಬ್‌, ಹರ್ಯಾಣ, ಚಂಡೀಗಡ, ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಕೆಲವು ರಾಜ್ಯಗಳಲ್ಲಿ ಸೆ.4ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದೂ ಹೇಳಿದೆ.

ಕರಾವಳಿಯಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಹಿನ್ನಡೆಯಾಗಿದ್ದು ಉತ್ತಮ ಬಿಸಿಲಿನ ವಾತಾವರಣವಿದೆ.

Comments are closed.