ಉಡುಪಿ: ಪಂಚಾಯತ್ ಚುನಾವಣೆ ಮುಗಿದ ಮೇಲೆ ಬಿಜೆಪಿಯ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಕಾದು ನೋಡಿ…. ಎಂದು ಮಾಜಿ ಶಾಸಕ ಗೋಪಾಲ ಪೂಜಾರಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬಿಜೆಪಿಯ ನಿಷ್ಠಾವಂತ ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಈಗಾಗಲೇ ಮಾತುಕತೆಗಳೂ ಮುಗಿದಿವೆ ಎಂದಿದ್ದಾರೆ.

ನಿನ್ನೆಯಷ್ಟೆ ಕಾಂಗ್ರೆಸ್ ಮುಖಂಡರಾಗಿದ್ದ ಆಲೂರು ಮಂಜಯ್ಯ ಶೆಟ್ಟಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು ಈ ಬಗ್ಗೆ ಮಾತಾಡಿದ ಅವರು, ಆಲೂರು ಮಂಜಯ್ಯ ಶೆಟ್ಟಿಯವರು ನಿಜ ಸ್ಥಿತಿಯನ್ನು ತಿರುಚುವ ಕೆಲಸ ಮಾಡಿದ್ದಾರೆ. ಎರಡು ಬಾರಿ ಜಿಲ್ಲಾ ಪಂಚಾಯತ್, ಒಂದು ಬಾರಿ ತಾಲೂಕು ಪಂಚಾಯತ್‍ನಲ್ಲಿ ಸ್ಪರ್ಧಿಸಿ ಎರಡು ಬಾರಿ ಗೆದ್ದು, ಒಮ್ಮೆ 80 ಮತಗಳ ಅಂತರದಲ್ಲಿ ಸೋತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ದುಡ್ಡಿನಿಂದ ಹೋಗಿದ್ದಾರೆ ಎನ್ನುವ ರೀತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ದೂರಿ ಪಕ್ಷವನ್ನು ಬಿಟ್ಟಿರುವ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆಲೂರು, ಹರ್ಕೂರಿನಲ್ಲಿ ಆ ಭಾಗದ ಕಾಂಗ್ರೆಸ್ ಕಾರ್ಯಕರ್ತರು ದುಡಿದಿದ್ದಾರೆ. ವಂಡ್ಸೆ. ಮರವಂತೆ ಭಾಗದವರಿಗೆ ಓಟು ಕೊಟ್ಟಿದ್ದಾರೆ. ಹೀಗಿರುವಾಗ ಬರೀ 80 ಓಟಿನಲ್ಲಿ ಸೋತಿರುವಾಗ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ.
ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ನಾನೂ ಸೋತಿದ್ದೇನೆ, ಗೆದ್ದಿದ್ದೇನೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ದೂರು ಅವರ ಬಗ್ಗೆ ತಪ್ಪು ಮಾಹಿತಿ ನೀಡುವುದು ವುದು ಸರಿಯಲ್ಲ. ಆಮಿಷ ಒಡ್ಡಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಕಾರ್ಯಕರ್ತರನ್ನು ದೂರುವುದು ತಪ್ಪು. ಕಾಂಗ್ರೆಸ್ ಪಕ್ಷದಿಂದ ಲಾಭ ಪಡೆದಿದ್ದಾರೆ. ಇದರಿಂದ ಪಕ್ಷಕ್ಕೆ ಯಾವುದೇ ನಷ್ಟವಾಗುವುದಿಲ್ಲ. ಆದರೆ, ಆ ಭಾಗದಲ್ಲಿ ಹೊಸ ಇರುವ ಕಾರ್ಯಕರ್ತರಲ್ಲಿ ನಾಯಕತ್ವ ಬೆಳೆಸಿ ಕೆಳ ಹಂತದಿಂದ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.
Comments are closed.