ಕರಾವಳಿ

ಕೊರೋನಾದ ನಡುವೆ ಉಡುಪಿಯಲ್ಲಿ ಸರಳ ಶ್ರೀ ಕೃಷ್ಣಾಷ್ಟಮಿ ಆಚರಣೆ!

Pinterest LinkedIn Tumblr

ಉಡುಪಿ: ಕೊರೋನಾ ವೈರಸ್ ನಡುವೆ ನಿಯಮಾನುಸಾರವಾಗಿ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸರಳ ರೀತಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಗುರುವಾರ ಆರಂಭವಾಗಿದೆ.

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ಆಚರಣೆಗಳು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದವು. ಗುರುವಾರ ಬೆಳಿಗ್ಗೆ ಶ್ರೀ ಕೃಷ್ಣ ಮಠದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ದೇವರಿಗೆ ‘ತೊಟ್ಟಿಲಿನಲ್ಲಿ ಬಾಲಕೃಷ್ಣ’ ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆಯೊಂದಿಗೆ ಮಹಾಪೂಜೆಯನ್ನು ನೆರವೇರಿಸಿದರು.

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡುಗಳನ್ನು ತಯಾರಿಸಲು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಶುಭಾವಸರದಲ್ಲಿ ಶ್ರೀಕೃಷ್ಣ ಮಠ ಶೋಭಿಸುತ್ತಿತ್ತು. ಶ್ರೀಕೃಷ್ಣ ಲೀಲೋತ್ಸವದ ಮೃಣ್ಮಯ ಉತ್ಸವ ಮೂರ್ತಿ ಕೂಡ ಆಕರ್ಷಣೀಯವಾಗಿತ್ತು.

Comments are closed.