ಕರಾವಳಿ

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ: ಈಶಪ್ರಿಯ ತೀರ್ಥ ಸ್ವಾಮೀಜಿಯವರಿಂದ ಮಧ್ಯರಾತ್ರಿ ಅರ್ಘ್ಯ ಪ್ರದಾನ

Pinterest LinkedIn Tumblr

ಉಡುಪಿ: ಕೊರೋನಾ ಹಿನ್ನೆಲೆಯಲ್ಲಿ ಸರಕಾರದ ನಿಯಮಾವಳಿಯಂತೆ ಸರಳವಾಗಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಾಂಪ್ರದಾಯಿಕವಾಗಿ ನೆರವೇರುತ್ತಿದೆ.

ಗುರುವಾರ ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ,ಮಹಾಪೂಜೆಯನ್ನು ನೆರವೇರಿಸಿ ನಂತರ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿ(12 .16) ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡಿದರು.ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.

ಶ್ರೀ ಕೃಷ್ಣ ಮಠದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿಯ ಪ್ರಯುಕ್ತ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಶ್ರೀ ಕೃಷ್ಣ ದೇವರಿಗೆ “ಯಶೋದೆ ಕೃಷ್ಣ” ಅಲಂಕಾರ ಮಾಡಿದರು. ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ವಿಟ್ಲಪಿಂಡಿ ಉತ್ಸವ ಇಂದು (ಶುಕ್ರವಾರ) ಮಧ್ಯಾಹ್ನ ನಡೆಯಲಿದೆ. ಸ್ವಾಮೀಜಿಯವರು, ಮಠದ ಸಿಬಂದಿಯಿಂದ ಸಾಂಪ್ರದಾಯಿಕ ಉತ್ಸವದ ಆಚರಣೆ ನಡೆಯಲಿದೆ.ಶುಕ್ರವಾರ ರಥಬೀದಿ ಪ್ರವೇಶ ವನ್ನು ನಿರ್ಬಂಧಿಸಲಾಗಿದೆ. ವಿಶೇಷ ಬಂದೋಬಸ್ತ್ ಹಿನ್ನೆಲೆ ನೂರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

Comments are closed.