ಕರಾವಳಿ

ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಡಿಸಿ, ಎಸ್ಪಿಗೆ ಮನವಿ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲದ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ, ಉಡುಪಿ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆ ಯಾಗಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಕಾಪು,ಸುಮಿತ್ ಮಡಿವಾಳ ಕಾರ್ಕಳ, ಅವಿನಾಶ್ ಕಾರ್ಕಳ, ಅಭಿರಾಜ್ ಸುವರ್ಣ,ಅನುರ್ ಮೆಂಡನ್, ಕೋಶಾಧಿಕಾರಿ ಮಟ್ಟು ಯತೀಶ್ ಕೋಟ್ಯಾನ್, ಜಿಲ್ಲಾ ಹಾಗೂ ಮಂಡಲ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು

Comments are closed.