ಕರಾವಳಿ

ಕೊಲ್ಲೂರಿನಲ್ಲಿ ವಶಪಡಿಸಿಕೊಂಡ ನ್ಯಾನೋ ಕಾರು ಬಹಿರಂಗ ಹರಾಜು

Pinterest LinkedIn Tumblr

ಉಡುಪಿ: ಕೊಲ್ಲೂರು ಪೊಲೀಸ್ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡ ಕೆಎ 19 ಎಮ್‌ಸಿ 2044 ನ್ಯಾನೋ ಕಾರು ಕೊಲ್ಲೂರು ಪೊಲೀಸ್ ಠಾಣೆ ಆವರಣದಲ್ಲಿದ್ದು, ಕಾರಿನ ವಾರಸುದಾರರು ತಮ್ಮ ವಶಕ್ಕೆ ಪಡೆದುಕೊಳ್ಳಲು ವಿಫಲರಾಗಿರುತ್ತಾರೆ.
ಸದ್ರಿ ಕಾರನ್ನು ನ್ಯಾಯಾಲಯದ ಆದೇಶದಂತೆ ಸೆಪ್ಟಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಕೊಲ್ಲೂರು ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕ ಬಹಿರಂಗ ಹರಾಜು ಮಾಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೊಲ್ಲೂರು ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08254-258233, 9480805460 ಸಂಪರ್ಕಿಸುವಂತೆ ಕೊಲ್ಲೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.