ಉಡುಪಿ: ನೀರಿಗಿಳಿಯದಂತೆ ಸ್ಥಳೀಯರು ಎಚ್ಚರಿಕೆ ನೀಡಿದರೂ ಕೂಡ ಅವರ ಮಾತು ದಿಕ್ಕರಿಸಿ ಸಮುದ್ರಕ್ಕಿಳಿದ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಘಟನೆ ಕಾಪು ಬೀಚ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ರೂಪೇಶ್(21) ಮತ್ತು ಕಾರ್ತಿಕ್(23) ಮೃತರು.
(ಸಾಂದರ್ಭಿಕ ಚಿತ್ರ)
ಬೆಂಗಳೂರು ಮೂಲದ ಐದು ಮಂದಿ ಸ್ನೇಹಿತರ ತಂಡ ಕಾಪು ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಸಮುದ್ರಕ್ಕೆ ಇಳಿಯದಂತೆ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ. ಸ್ಥಳೀಯರ ಎಚ್ಚರಿಕೆಯನ್ನು ಲೆಕ್ಕಿಸದೆ ಸಮುದ್ರಕ್ಕಿಳಿದ ಯುವಕರ ಪೈಕಿ ಇಬ್ಬರು ಸಮುದ್ರಪಾಲಾಗಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ.
ಇನ್ನು ನೀರಿಗೆ ಇಳಿಯುವ ಮೊದಲೇ ಸ್ಥಳೀಯ ಮೀನುಗಾರರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿಗಳು ಎಚ್ಚರಿಕೆ ನೀಡಿದ್ದರು. ಎಚ್ಚರಿಕೆ ನೀಡಿದ ಬಳಿಕವೂ ಸಮುದ್ರಕ್ಕೆ ಇಳಿದ ಯುವಕರು ಅಲೆಗಳ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.