ಉಡುಪಿ: ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್’ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆ ಅಕ್ಟೋಬರ್ 22 ರಂದು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಳ್ಳಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಈ ಕುರಿತು ವೀಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಶಾಸಕರು, ಅಂದಾಜು 115 ಕೋಟಿ ವೆಚ್ಚದಲ್ಲಿ ಕಟ್ಟಡ ಮತ್ತು 250 ಹಾಸಿಗೆಯ ಸಾಮರ್ಥ್ಯಕ್ಕೆ ಬೇಕಾಗುವಷ್ಟು ಸಿಬಂದಿ ಹಾಗೂ ಪೀಠೋಪಕರಣಗಳು ಈ ಯೋಜನೆಯಲ್ಲಿ ಸೇರ್ಪಡೆಗೊಳ್ಳಲಿದೆ.
ಉಡುಪಿ ಜನತೆಯ ಹಲವಾರು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಉಡುಪಿಯ ಸಮಸ್ತ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.