ಉಡುಪಿ: ಕೊರೋನಾ ಹಿನ್ನೆಲೆ ಲಾಕ್ ಡೌನ್ ಆರ್ಥಿಕ ಸಂಕಷ್ಟಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಉಡುಪಿಯ ಹಿರೇಬೆಟ್ಟು ಎಂಬಲ್ಲಿ ನಡೆದಿದೆ.
ವಸಂತ ಭಟ್ (47) ಎನ್ನುವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಲಾಕ್ ಡೌನ್ ಆದಾಗಿನಿಂದ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಸಂತ್ ಭಟ್ ಜೀವನದಲ್ಲಿ ಜಿಗುಪ್ಸೆಗೊಂಡು ತಾನು ವಾಸವಿದ್ದ ಮನೆಯ ಮಲಗುವ ಕೋಣೆಯ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.