ಉಡುಪಿ: ರಿಪಬ್ಲಿಕ್ ವಾಹಿನಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯನ್ನು ಬಂಧಿಸಿರುವ ಮಹಾರಾಷ್ಟ್ರ ಸರಕಾರದ ಕ್ರಮ ಖಂಡಿಸಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚದ ವತಿಯಿಂದ ಮಣಿಪಾಲದ ಟೈಗರ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಯಶ್ ಪಾಲ್ ಸುವರ್ಣ, ಜಿ.ಪಂ ಸದಸ್ಯೆ ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ನಗರಸಭೆ ಸದಸ್ಯರಾದ ಪ್ರಭಾಕರ ಪೂಜಾರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಹಾಗೂ ವಿವಿಧ ಕ್ಷೇತ್ರ ವ್ಯಾಪ್ತಿಯ ಪದಾಧಿಕಾರಿಗಳು ಇದ್ದರು.
Comments are closed.