ಕರಾವಳಿ

ಬೈಂದೂರು ಸಮೀಪದ ನಾವುಂದದಲ್ಲಿ ಬೈಕ್-ಕಾರು ಅಪಘಾತ: ಓರ್ವ ಗಂಭೀರ, ಇನ್ನೋರ್ವನಿಗೆ ಗಾಯ

Pinterest LinkedIn Tumblr

ಕುಂದಾಪುರ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ನಾವುಂದ-ಮಸ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದ ಮತ್ತೋರ್ವ ಸವಾರನೂ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸವಾರ ಕುಂದಾಪುರದಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ. ಈ ವೇಳೆ ಸಿದ್ದಾಪುರ ಕಡೆ ಸಾಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಗಾಯಾಳುಗಳ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Comments are closed.