ಕರಾವಳಿ

ಕೋವಿಡ್ 19 ನಿರ್ಮೂಲನೆವಾಗುವರೆಗೆ ಜಾಗೃತಿ ವಹಿಸಿ : ದಿನಕರ ಬಾಬು

Pinterest LinkedIn Tumblr

ಉಡುಪಿ: ಕೋವಿಡ್ 19 ಗೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಲಭ್ಯವಾಗಿ, ಈ ರೋಗ ಜಾಗತಿಕವಾಗಿ ನಿರ್ಮೂಲನೆವಾಗುವವರೆಗೆ ಸಾರ್ವಜನಿಕರು ಕೋವಿಡ್ ನಿಯಂತ್ರಣಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಅವರು ಶುಕ್ರವಾರ, ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆವರಣದಲ್ಲಿ, ಕೋವಿಡ್19 ಕುರಿತಂತೆ ಜಿಲ್ಲೆಯಾದ್ಯಂತ ಎಲ್.ಇ.ಡಿ. ವಾಹನದ ಮೂಲಕ ನಡೆಯುವ ವಿಶೇಷ ಜಾಗೃತಿ ಪ್ರಚಾರ ಕಾರ್ಯಕ್ರಮದ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಸಾರ್ವಜನಿಕರು ಜಿಲ್ಲೆಯಲ್ಲಿ ಕೋವಿಡ್19 ಇಲ್ಲ ಎಂದು ಮೈಮರೆಯದೇ , ಸಂಪೂರ್ಣವಾಗಿ ಈ ರೋಗ ನಿರ್ಮೂಲನೆವಾಗುವವರೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಮತ್ತು ಕೈ ಗಳ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು,ಕೋವಿಡ್ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷಿಸಿಕೊಳ್ಳುವಂತೆ ದಿನಕರ ಬಾಬು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ವಾರ್ತಾ ಸಹಾಯಕ ಶಿವಕುಮಾರ್ ಬಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಡುಪಿ ಜಿಲ್ಲೆಯಾದ್ಯಂತ ಪ್ರತಿದಿನ 10 ಗ್ರಾಮಗಳಲ್ಲಿ 18 ದಿನಗಳ ಕಾಲ ಒಟ್ಟು 180 ಗ್ರಾಮಗಳಲ್ಲಿ ಸಂಚರಿಸುವ ಈ ಎಲ್.ಇ.ಡಿ ವಾಹನಗಳು ಬೈಹತ್ ಎಲ್.ಇ.ಡಿ ಪರದೆಯ ಮೂಲಕ ಗ್ರಾಮೀಣ ಭಾಗದಲ್ಲಿ ಕೋವಿಡ್19 ಪಿಡುಗನ್ನು ತಡೆಗಟ್ಟಲು ಸಾರ್ವಜನಿಕರು ಕೈಗೊಳ್ಳಬೇಕಾದ ಸುರಕ್ಷತಾ/ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಲಿದೆ.

Comments are closed.