ಕರಾವಳಿ

ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೇಳೂರು ರಾಘವೇಂದ್ರ ಶೆಟ್ಟಿ ನೇಮಕ

Pinterest LinkedIn Tumblr

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೇಳೂರು ರಾಘವೇಂದ್ರ ಶೆಟ್ಟಿ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ಕರ್ನಾಟಕ ರಾಜ್ಯದ ಸೊಗಸಾದ ಕರಕುಶಲತೆಯ ಶ್ರೀಮಂತ ಸಂಪ್ರದಾಯವನ್ನು ಅಭಿವೃದ್ಧಿಪಡಿಸಲು, ಸಂರಕ್ಷಿಸಲು ಮತ್ತು ಉತ್ತೇಜಿಸಲು 1964 ರಲ್ಲಿ ಸ್ಥಾಪಿಸಲಾದ ಕರ್ನಾಟಕ ಸರ್ಕಾರದ ಒಂದು ಅಂಗಸಂಸ್ಥೆಯಾಗಿದೆ. ಕಳೆದೆರಡು ತಿಂಗಳ ಹಿಂದೆ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಜಿ. ಕುಮಾರ ನಾಯಕ ಅವರನ್ನು ನೇಮಿಸಿದ್ದು ಆ ಆದೇಶ ರದ್ಧುಪಡಿಸಿ ಬೇಳೂರು ರಾಘವೇಂದ್ರ ಶೆಟ್ಟಿಯವರನ್ನು ನೇಮಿಸಿ ಆದೇಶ ನೀಡಿದೆ.

ಮೂಲತಃ ಉಡುಪಿ ಜಿಲ್ಲೆಯ ತೆಕ್ಕಟ್ಟೆ ಸಮೀಪದ ಬೇಳೂರಿನವರಾದ ರಾಘವೇಂದ್ರ ಶೆಟ್ಟಿಯವರು ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಮಹಾತ್ಮ ಗಾಂಧೀ ಸೇವಾ ಟ್ರಸ್ಟ್ ಹೆಸರಿನಲ್ಲಿ ಕೊರೋನಾ ಲಾಕ್ಡೌನ್ ಸಂದರ್ಭ 2-3 ತಿಂಗಳ ಕಾಲ ಊರಿನಲ್ಲಿ ಕೂಲಿ ಕಾರ್ಮಿಕರಿಗೆ ನಿತ್ಯವೂ ಊಟ ನೀಡಿದ್ದರು. ಲಾಕ್ಡೌನ್ ಬಳಿಕ ಬೇಳೂರು ಟಾಸ್ಕ್ ಫೋರ್ಸ್ ಹೆಸರಿನಲ್ಲಿ ಬೆಂಗಳೂರಿನಲ್ಲಿ ಕಿಟ್ ವಿತರಿಸಿದ್ದರು.

Comments are closed.