ಕರಾವಳಿ

ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Pinterest LinkedIn Tumblr

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಸಮೀಪದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಯು. ಆರ್. ಸಭಾಪತಿ, ದೇವಸ್ಥಾನದ ಆಡಳಿತ ಧರ್ಮದರ್ಶಿ ಶೆಟ್ಟಿಪಾಲ್ ಸಚ್ಚಿದಾನಂದ ಚಾತ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ ಕೊಡವೂರ್ ಇದ್ದರು.

ಕೊಲ್ಲೂರಿನಲ್ಲಿ ತಂಗುವ ಡಿ.ಕೆ. ಶಿವಕುಮಾರ್ ಬೆಳಿಗ್ಗೆ ಮೂಕಾಂಬಿಕೆ ದರ್ಶನ ಹಾಗೂ ಪೂಜೆ ಸಲ್ಲಿಸಿದ ಬಳಿಕ ಉಡುಪಿಗೆ ತೆರಳಲಿದ್ದಾರೆ.

Comments are closed.