ಕರಾವಳಿ

ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

Pinterest LinkedIn Tumblr

ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಡಿ ಕೆ ಶಿವಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಕಷ್ಟದ ದಿನಗಳಲ್ಲಿ ಕಾರ್ಯಕರ್ತರು ದೇವಿಯಲ್ಲಿ ಪ್ರಾರ್ಥಿಸಿಕೊಂಡಿದ್ದರು ಇಂದು ತಾಯಿಯ ಸನ್ನಿಧಾನಕ್ಕೆ ಬಂದಿದ್ದೇನೆ. ಮನಸ್ಸಿಗೆ ಸಂತೋಷವಾಗಿದೆ ಮುಂದೆ ಕುಟುಂಬ ಸಮೇತ ಬಂದು ತಾಯಿಯ ದರ್ಶನ ಪಡೆಯುವೆ ಎಂದರು

ಈ ವೇಳೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಜೆ.ಡಿ ನಾಯ್ಕ್, ಯುಆರ್ ಸಭಾಪತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಬೈಂದೂರು ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್, ಉದ್ಯಮಿ ಯು.ಬಿ ಶೆಟ್ಟಿ, ಮುಖಂಡರಾದ ಶೇಖರ್ ಪೂಜಾರಿ, ಪ್ರಶಾಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Comments are closed.