ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಬೈಂದೂರು ವೃತ್ತ ಕಚೇರಿಯ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಂತೋಷ್ ಕಾಯ್ಕಿಣಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಹಿಂದೆ ಬೈಂದೂರು ಸಬ್ ಇನ್ಸಪೆಕ್ಟರ್ ಆಗಿದ್ದ ಸಂತೋಷ್ ಕಾಯ್ಕಿಣಿ ಅವರು ಮೂರು ವರ್ಷ ಸೇವೆ ಮಾಡಿದ್ದು ಹಲವು ಪ್ರಕರಣಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಬಳಿಕ ಕೋಟ, ಹೊನ್ನಾವರದ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಬಳಿಕ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ ಹೊಂದಿ ನಕ್ಸಲ್ ನಿಗ್ರಹ ದಳದಲ್ಲಿ ಕಳೆದ ಒಂದು ವರ್ಷಕ್ಕೂ ಅಧಿಕ ಸಮಯದಿಂದ ಕಾರ್ಯ ನಿರ್ವಹಿಸಿದ್ದರು. ಕಳೆದ ವಾರ ಅವರನ್ನು ಬೈಂದೂರು ವೃತ್ತ ನಿರೀಕ್ಷಕರಾಗಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿತ್ತು.