ಕರಾವಳಿ

ಗ್ರಾಪಂ ಸದಸ್ಯ ಸ್ಥಾನಗಳ ಬಹಿರಂಗ ಹರಾಜು ಮಾಡಿದಲ್ಲಿ ಕ್ರಿಮಿನಲ್ ಪ್ರಕರಣ: ಡಿಸಿ

Pinterest LinkedIn Tumblr

ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತ್ ಸ್ಥಾನಗಳನ್ನು ಬಹಿರಂಗ ಹರಾಜಿನ ಮೂಲಕ ಮತದಾರರಿಗೆ ಹಣದ ಆಮಿಷವೊಡ್ಡಿ ಖರೀದಿಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಡಿಸೆಂಬರ್ 9 ರಂದು ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿರುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಹರಾಜು ಹಾಗೂ ಹಣದ ಆಮೀಷಕ್ಕಾಗಿ ಸ್ಥಾನಗಳು ಖರೀದಿಸುವಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿ, ಅಂತಹ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮಾಹಿತಿಯನ್ನು ಸಲ್ಲಿಸಲಾಗುತ್ತದೆ.

ಇಂತಹ ಘಟನೆಗಳು ಸಾರ್ವಜನಿಕರಿಗೆ ಕಂಡುಬಂದಲ್ಲಿ ಸಂಬಂಧಪಟ್ಟ ತಹಶೀಲ್ದಾರರಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.