ಕರಾವಳಿ

ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯ ವಿಧಿವಶ

Pinterest LinkedIn Tumblr

ಉಡುಪಿ: ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿ ಜಿಲ್ಲೆಯ ಡಾ. ಬನ್ನಂಜೆ ಗೋವಿಂದಾಚಾರ್ಯ ಇಂದು(ಭಾನುವಾರ) ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ 11 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು.

ಬನ್ನಂಜೆ ಗೋವಿಂದಾಚಾರ್ಯ ನಿಧನವನ್ನು ಕುಟುಂಬ ಮೂಲ ಸ್ಪಷ್ಟಪಡಿಸಿವೆ. ಗೋವಿಂದಾಚಾರ್ಯ ಅವರು 4 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ ಎನ್ನಲಾಗಿದೆ.

ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದ ಬನ್ನಂಜೆ ಗೋವಿಂದಾಚಾರ್ಯ ಅವರು, ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾಂಡಿತ್ಯ ಸಾಧಿಸಿರುವ ಇವರು ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಬಾಣಭಟ್ಟನ ಕಾದಂಬರಿ,
ಕಾಳೀದಾಸನ ಶಾಕುಂತಲಾ, ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು. ಇಷ್ಟೆ ಅಲ್ಲದೆ ಚಲನಚಿತ್ರಗಳಿಗೂ ಸಂಭಾಷಣೆ ಬರೆದಿದ್ದರು.

 

Comments are closed.