ಉಡುಪಿ: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಮರ್ಣೆ ಎಂಬಲ್ಲಿ ಸಂಭವಿಸಿದೆ. ಮಂಜುನಾಥ ಶೆಟ್ಟಿ (32) ಮೃತ ವ್ಯಕ್ತಿ.
ಕಾರು ಚಾಲಕ ಅತಿಯಾದ ವೇಗದಿಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಮಂಜುನಾಥ್ ಶೆಟ್ಟಿಯನ್ನು ಆಸ್ಪತ್ರೆಗೆ ರವಾನಿಸಿದ್ದು ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.