ಕರಾವಳಿ

ಆಟೋ ರಿಕ್ಷಾದಲ್ಲಿ ಅಕ್ರಮ ಮದ್ಯ ಸಾಗಾಟ- ವಾಹನ ಹಾಗೂ ಮದ್ಯ ವಶ

Pinterest LinkedIn Tumblr

ಉಡುಪಿ: ಆಟೋ ರಿಕ್ಷಾದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಆಟೋ ಹಾಗೂ ಮದ್ಯ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದಾನೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶದಂತೆ, ಉಡುಪಿ ಡೆಪ್ಯೂಟಿ ಕಮಿಷನರ್ ಆಫ್ ಎಕ್ಸೈಸ್ ಇವರ ನಿರ್ದೇಶನದ ಮೇರೆಗೆ ಉಡುಪಿ ವಲಯ-1 ರ ಅಬಕಾರಿ ಉಪ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಶನಿವಾರ ಕಾಪು ತಾಲೂಕು ಪಿಲಾರು ಗ್ರಾಮದ ಸೂಡ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯ ಸ್ವಾಗತ ಗೋಪುರದ ಬಳಿ ಅಕ್ರಮವಾಗಿ ಆಟೋರಿಕ್ಷಾದಲ್ಲಿ 25.920 ಲೀ ಮದ್ಯ ಹಾಗೂ 31.200 ಲೀ ಬಿಯರ್ ಸಾಗಾಟ ಮಾಡುತ್ತಿರುವುದು ಪತ್ತೆ ಹಚ್ಚಿ ವಾಹನ ಹಾಗೂ ಮದ್ಯವನ್ನು ವಶಪಡಿಸಿಕೊಂಡರು.

ಆರೋಪಿಯು ಪರಾರಿಯಾಗಿದ್ದು, ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಉಡುಪಿ ವಲಯ-1 ರ ಅಬಕಾರಿ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.