ಕರಾವಳಿ

ಕುಂದಾಪುರದ ಲಾಡ್ಜಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಹಲ್ಲೆ: ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

Pinterest LinkedIn Tumblr

ಕುಂದಾಪುರ: ಇಲ್ಲಿನ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂದೆ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೇರೆ ಜಿಲ್ಲೆಯವಳು ಎನ್ನಲಾದ ಅಪ್ರಾಪ್ತ ಬಾಲಕಿಯನ್ನು ಮೂರು ದಿನಗಳಿಂದ ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಪ್ರಕರಣದಲ್ಲಿ ಉಪ್ಪಿನಕುದ್ರುವಿನ ಸಂತೋಷ್ ದೇವಾಡಿಗ (29) ಎಂಬಾತನನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಲಾಡ್ಜ್ ಒಂದರಲ್ಲಿ ಈ ಅಕ್ರಮ ಚಟುವಟಿಕೆ ನಡೆದಿದೆ‌. ಆರೋಪಿಯನ್ನು ಸದ್ಯ ಪೊಲೀಸರು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಸತೀಶ್ ಎಂಬಾತನನ್ನು ಬಂಧಿಸಲಾಗಿದ್ದು ನೊಂದ ಯುವತಿಯನ್ನು ರಕ್ಷಿಸಲಾಗಿದೆ.

Comments are closed.