ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ವೀಡಿಯೊ ಅಪ್‌ಲೋಡ್ ಮಾಡಿದ ವ್ಯಕ್ತಿ ವಿರುದ್ಧ ಕೇಸು ದಾಖಲು

Pinterest LinkedIn Tumblr

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ವೀಡಿಯೋವನ್ನು ಅಪ್‌ಲೋಡ್ ಮಾಡಿದ ವ್ಯಕ್ತಿಯ ವಿರುದ್ದ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಸಾಂದರ್ಭಕ ಚಿತ್ರ)

ಕುಂದಾಪುರದ ಮರವಂತೆಯ ಜಯರಾಮ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು ಆರೋಪಿ ಮೊಬೈಲ್ ಬಳಸಿ ಕೆಲ ಸಮಯದ ಹಿಂದೆ ಹಲವಾರು ಬಾರಿ ಮಕ್ಕಳ ಅಶ್ಲೀಲ ವೀಡಿಯೋವನ್ನು ಆತನ ಇನ್ಸ್ಟಾಗ್ರಾಂ ನಲ್ಲಿ ಅಪ್ ಲೋಡ್ ಮಾಡಿದ್ದ.

ಸೈಬರ್ ಟಿಪ್ ಲೈನ್ ಮೂಲಕ ಈ ದೂರು ಸ್ವೀಕೃತವಾಗಿದ್ದು ಆರೋಪಿ ಶಿಕ್ಷಾರ್ಹ ಅಪರಾಧವೆಸಗಿರುವುದು ಕಂಡು ಬಂದಿರುವುದರಿಂದ ಸೆನ್ ಅಪರಾಧ ಠಾಣೆ ಇನ್ಸ್‌ಪೆಕ್ಟರ್ ರಾಮಚಂದ್ರ ನಾಯಕ್ ಆರೋಪಿ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

Comments are closed.