ಕರಾವಳಿ

2 ಹಂತದಲ್ಲಿ ಗ್ರಾ. ಪಂ. ಸಾರ್ವತ್ರಿಕ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಚುನಾವಣೆಯು ಶಾಂತ ಮತ್ತು ಮುಕ್ತವಾಗಿ ನಡೆಯುವಂತಾಗಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಮದ್ಯ ಮಾರಾಟ ನಿಷೇಧಿಸಿ ಉಡುಪಿ ಡಿಸಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಡಿಸೆಂಬರ್ 22 ರಂದು ಉಡುಪಿ, ಹೆಬ್ರಿ, ಬ್ರಹ್ಮಾವರ ಹಾಗೂ ಬೈಂದೂರು ತಾಲೂಕಿನಲ್ಲಿ ಮೊದಲನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 20 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 22 ರ ಸಂಜೆ 5 ಗಂಟೆಯವರೆಗೆ ಹಾಗೂ ಡಿಸೆಂಬರ್ 27 ರಂದು ಕುಂದಾಪುರ, ಕಾರ್ಕಳ ಹಾಗೂ ಕಾಪು ತಾಲೂಕಿನಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಡಿಸೆಂಬರ್ 25 ರ ಸಂಜೆ 5 ಗಂಟೆಯಿಂದ ಡಿಸೆಂಬರ್ 27 ರ ಸಂಜೆ 5 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

Comments are closed.