ಕರಾವಳಿ

ಕೋಟ ಶ್ರೀನಿವಾಸ ಪೂಜಾರಿ ಬಗ್ಗೆ ಅವಹೇಳನ: ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಆಗ್ರಹ

Pinterest LinkedIn Tumblr

ಉಡುಪಿ: ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅನಿಲ್ ಕುಮಾರ್ ಶೆಟ್ಟಿ ಎಂಬವರು ಅಸಭ್ಯವಾಗಿ ವೈಯಕ್ತಿಕವಾಗಿ ತೇಜೋವಧೆ ನಡೆಸಿರುವುದು ಖಂಡನೀಯ ಎಂದು ಜಯಕರ್ನಾಟಕ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಕಿಡಿಕಾರಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿಯವರು ರಾಜಕೀಯವಾಗಿ, ವೈಯಕ್ತಿಕವಾಗಿ ಯಾರನ್ನೂ ಅಸಂಬದ್ಧ ಟೀಕೆ ಮಾಡಿದವರಲ್ಲ, ತಮ್ಮ ಜೀವನದಲ್ಲಿ ಯಾವುದೇ ರೀತಿಯ ಕಪ್ಪು ಚುಕ್ಕೆ ಬರುವಂತಹ ಕೆಲಸಗಳಿಗೆ ಕೈಹಾಕಿದವರಲ್ಲ. ಸರಳ ಸಜ್ಜನಿಕೆಯಿಂದ ಜನಸಾಮಾನ್ಯರಿಗೆ ಯೋಜನೆಗಳನ್ನು ರೂಪಿಸುವ ಹಲವಾರು ಕ್ರಾಂತಿಕಾರಿ ಬೆಳವಣಿಗೆಗಳನ್ನು ತನ್ನ ವ್ಯಾಪ್ತಿಯ ಇಲಾಖೆಗಳಲ್ಲಿ ಕಾರ್ಯರೂಪಕ್ಕೆ ತಂದವರಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಎರಡು ಬಾರಿ ಸಚಿವರಾದವರು. ಇಂತಹ ವ್ಯಕ್ತಿಯ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಜಾತಿ ಸೂಚಕಗಳನ್ನು ಬಳಸಿ ಸಮಾಜದಲ್ಲಿ ದ್ವೇಷದ ವಾತಾವರಣ ನಿರ್ಮಿಸುವಂತಹ ಅಸಭ್ಯವಾದ ಬರಹಗಳನ್ನು ಹಾಕಿರುವುದು ಖಂಡನೀಯ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದಾತನ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲಾಖೆಗೆ ಆಗ್ರಹಿಸಿದ ಅವರು ಸಾರ್ವಜನಿಕವಾಗಿ ಈ ವ್ಯಕ್ತಿ ಕ್ಷಮೆಯಾಚಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಈತನ ಬಗ್ಗೆ ಕಾನೂನಾತ್ಮಕ ಹೋರಾಟದ ಎಚ್ಚರಿಕೆಯನ್ನು ನೀಡಿದರು.

 

Comments are closed.