ಕರಾವಳಿ

‘ಬೇಟಿ ಬಚಾವೋ ಬೇಟಿ ಪಡಾವೋ’- ಉಡುಪಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Pinterest LinkedIn Tumblr

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅಂಗವಾಗಿ ಜಿಲ್ಲಾ ಮಟ್ಟದ ರಾಷ್ಟ್ರೀಯಾ ಹೆಣ್ಣು ಮಕ್ಕಳ ದಿನಾಚರಣೆ ಬಾಲಕಿಯರ ಬಾಲಮಂದಿರ ನಿಟ್ಟೂರಿನಲ್ಲಿ ಜರುಗಿತು. ಪುಟಾಣಿ ಮಕ್ಕಳೊಂದಿಗೆ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು .

ಅಧ್ಯಕ್ಷತೆ ವಹಿಸಿರುವ ಆರ್ .ಶೇಷಪ್ಪ ಮಾತನಾಡಿ ಮಕ್ಕಳ ರಕ್ಷಣೆ ಪೋಷಣೆ ಹಾಗೂ ಸರ್ಕಾರದ ಯೋಜನೆ ಅನುಷ್ಠಾನ ಗೊಳಿಸುವ ಮೂಲಕ ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗುವದೆಂದರು. ಮುಖ್ಯ ಅಥಿತಿಯಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ ಮಾತನಾಡಿ ಮಕ್ಕಳ ಆರೋಗ್ಯ, ಶಿಕ್ಷಣ, ಪೌಷ್ಟಿಕತೆ, ಬಾಲ್ಯವಿವಾಹ ಮೊದಲಾದ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿದರು .

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕರಾದ
ಚಂದ್ರಿಕಾ ಎಸ್ ನಾಯಕ್, ನಿಟ್ಟೂರು ಬಾಲಕಿಯರ ಬಾಲಮಂದಿರ ಅಧೀಕ್ಷಕಿ ಸುಮತಿ, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯ, ಮಹಿಳಾ ಶಕ್ತಿ ಕೇಂದ್ರದ ಮಹಿಳಾ ಕಲ್ಯಾಣಾಧಿಕಾರಿ ದೀಪಾ ಉಪಸ್ಥಿತರಿದ್ದರು. ಮಹಿಳಾ ಶಕ್ತಿ ಕೇಂದ್ರದ ಸಂಯೋಜಕರಾದ ಶಾರದಾ ಸ್ವಾಗತಿಸಿ ಅನುಷಾ ವಂದಿಸಿದರು.

Comments are closed.