ಕರಾವಳಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ

Pinterest LinkedIn Tumblr

ಕುಂದಾಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ನಿಧನರಾದರು.

28 ವರ್ಷಗಳಿಂದ ವಿವಿಧ ಮೇಳಗಳಲ್ಲಿ ಸ್ತ್ರೀ ವೇಷಧಾರಿಯಾಗಿ ಹೆಸರಾಗಿದ್ದ ನಾರಾಯಣ ಗಾಣಿಗ ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಕಲಾಸೇವೆ ಮಾಡಿದ್ದರು. ಚಿತ್ರಾಂಗದೆ, ದ್ರೌಪದಿ, ಶಶಿಪ್ರಭೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ನಾರಾಯಣ ಗಾಣಿಗ ಮಿಂಚಿದ್ದರು.

ನಾರಾಯಣ ಗಾಣಿಗರ ಕಲೆ ಗುರುತಿಸಿ 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ 2014ರಲ್ಲಿ ಯಕ್ಷ ಮಿತ್ರ ಕೂಟದ ರಂಗಸ್ಥಳ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರಗಳು ಲಭಿಸಿದ್ದವು.

Comments are closed.