ಉಡುಪಿ: ಖಾಲಿ ಎಲ್ಪಿಜಿ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ಘಟನೆ ಗುರುವಾರ ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿಜಯ ಬ್ಯಾಂಕಿನ ಪಂಗಲಾ ಶಾಖೆಯ ಬಳಿ ನಡೆದಿದೆ.

ಖಾಲಿ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿಸಿಕೊಂಡ ಲಾರಿ ಮಂಗಳೂರು ಕಡೆಗೆ ಚಲಿಸುತ್ತಿದ್ದ ವೇಳೆ ಚಾಲಕನಿಗೆ ನಿಯಂತ್ರಣ ತಪ್ಪಿ ವಾಹನವು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಬಳಿಕ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.
ಹೆದ್ದಾರಿಯುದ್ದಕ್ಕೂ ಸಿಲಿಂಡರ್ಗಳು ಉರುಳಿದ್ದು ಅದೃಷ್ಟವಶಾತ್ ಯಾರಿಗೂ ಹಾನಿ ಉಂಟಾಗಿಲ್ಲ. ಚಾಲನ ಹಾಗೂ ಸಹಾಯಕನೂ ಕೂಡಾ ಅಪಾಯದಿಂದ ಪಾರಾಗಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Comments are closed.