ಕರಾವಳಿ

ಅನರ್ಹರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ರೆ ಕ್ರಿಮಿನಲ್ ಮೊಕದ್ದಮೆ ದಾಖಲಾಗುತ್ತೆ ಹುಷಾರ್..!

Pinterest LinkedIn Tumblr

ಉಡುಪಿ: ಅನ್ನಬಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಆದ್ಯತಾ (ಬಿಪಿಎಲ್) ಕಾರ್ಡ್ ಅನ್ನು ಆರ್ಥಿಕವಾಗಿ ಸದೃಢವಾದ ಕೆಲವು ಕುಟುಂಬಗಳು ಬಿಪಿಎಲ್ ಕಾರ್ಡ್ ಮಾನದಂಡವನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿ ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡು ಬಂದಿದೆ ಎನ್ನಲಾಗಿದೆ.

(ಸಾಂದರ್ಭಿಕ ಚಿತ್ರ)

ಅಂತಹ ಅನರ್ಹರು ಪಡೆದಿರುವ ಕಾರ್ಡನ್ನು ಪತ್ತೆ ಹಚ್ಚಿ ರದ್ದುಪಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್‌ನ್ನು ಕೂಡಲೇ ಹಿಂದಿರುಗಿಸದಿದ್ದಲ್ಲಿ ಅಂತಹ ಅನರ್ಹ ಕಾರ್ಡುಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿ, ಅಂತಹವರ ವಿರುದ್ಧ ಅಗತ್ಯ ಕ್ರಮ ಜರುಗಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.