ಕರಾವಳಿ

ರೈತ ಸಂತೆಯ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

Pinterest LinkedIn Tumblr

ಉಡುಪಿ: ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ರೈತ ಸೇವಾ ಕೇಂದ್ರದ ಆವರಣದಲ್ಲಿ ಪ್ರತಿ ಗುರುವಾರ ರೈತ ಸಂತೆಯನ್ನು ನಡೆಸಿ, ರೈತರಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ, ಮಧ್ಯವರ್ತಿಗಳ ಹಾವಳಿ ತಪ್ಪಿಸುವಂತೆ ಹಾಗೂ ಗ್ರಾಹಕರಿಗೆ ತಾಜಾ ತರಕಾರಿ ಮತ್ತು ಇತರೇ ಪದಾರ್ಥಗಳನ್ನು ರೈತ ಸಂತೆಯ ಮೂಲಕ ಪೂರೈಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತ ಸಂತೆಯಲ್ಲಿ ಭಾಗವಹಿಸುವ ರೈತರಿಗೆ ಇಲಾಖೆ ವತಿಯಿಂದ ಗುರುತಿನ ಚೀಟಿಗಳನ್ನು ನೀಡುವಂತೆ ಸೂಚಿಸಿದ ಅವರು, ಆಸಕ್ತಿಯುಳ್ಳ ರೈತರು ರೈತ ಸಂತೆಯಲ್ಲಿ ಭಾಗವಹಿಸಲು ಸಲ್ಲಿಸಿರುವ ಅರ್ಜಿಗಳನ್ನು ಸ್ವೀಕರಿಸುವಂತೆ ತೋಟಗಾರಿಕಾ ಉಪನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ರೈತ ಸೇವಾ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯರು, ಮಳಿಗೆದಾರರು, ಬೆನಗಲ್ ತರಕಾರಿ ಬೆಳೆಗಾರರ ಸೌಹಾರ್ದ ಸೊಸೈಟಿ (ರಿ) ಯ ಕಾರ್ಯದರ್ಶಿ, ಮತ್ತಿತರರು ಉಪಸ್ಥಿತರಿದ್ದರು.

Comments are closed.