ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮುಂಡ್ಲಿ ಡ್ಯಾಮ್‌ನಿಂದ ಹೂಳೆತ್ತುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಹೂಳಿನಲ್ಲಿ ದೊರಕುವ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಸ್ಯಾಂಡ್ ಆ್ಯಪ್‌ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ.

(ಸಾಂದರ್ಭಿಕ ಚಿತ್ರ)
ಅದ್ದರಿಂದ ಸದರಿ ಮರಳನ್ನು ಪಡೆದುಕೊಳ್ಳಲು ಇಚ್ಚಿಸುವವವರು ಉಡುಪಿ ಇ-ಸ್ಯಾಂಡ್ ಆ್ಯಪ್ ಮುಖಾಂತರ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2572333 ಅನ್ನು ಸಂಪರ್ಕಿಸುವಂತೆ ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.