ಕರಾವಳಿ

ಸ್ಥಳೀಯರಿಗೆ ಟೋಲ್ ವಿನಾಯಿತಿ ಒತ್ತಾಯಿಸಿ ಕೋಟದಲ್ಲಿ ಬಂದ್: ಸಾಸ್ತಾನ ಟೋಲ್‌ಗೇಟ್ ಬಳಿ ಪ್ರತಿಭಟನೆ

Pinterest LinkedIn Tumblr

ಉಡುಪಿ: ಜಿಲ್ಲೆಯ ಸಾಸ್ತಾನ ಟೋಲ್ಗೇಟ್ ನಲ್ಲಿ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡುವಂತೆ ಒತ್ತಾಯಿಸಿ ಇಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಕೋಟ ಜಿ.ಪಂ ಕ್ಷೇತ್ರದಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಸಾಸ್ತಾನ ಟೋಲ್‌ಗೇಟ್ ಎದುರು ಸಾವಿರಾರು ಸಂಖ್ಯೆ ಯಲ್ಲಿ ಸೇರಿದ ಸ್ಥಳೀಯರು, ನ್ಯಾಯ ಒದಗಿಸುವಂತೆ ಒತ್ತಾಯಿಸಿ ಧರಣಿ ನಡೆಸಿದರು. ಸಂಜೆ ವೇಳೆ ಪ್ರತಿಭಟನೆ ಇನ್ನಷ್ಟು ಕಾವು ಪಡೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ವಿವಿಧ ಧಾರ್ಮಿಕ ಮುಖಂಡರು, ರಾಜಕೀಯ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಸ್ಥಳಕ್ಕೆ ಆಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಪ್ರತಿಭಟನಕಾರರನ್ನು ಸಮಾಧಾನ ಪಡಿಸಿ, ನ್ಯಾಯ ಕೊಡಿಸುವ ಭರವಸೆ ನೀಡಿ ದರು.

ಈ ವೇಳೆ ಸಭೆಗೆ ಬಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಟೋಲ್ ವಿಚಾರದಲ್ಲಿ ಸ್ಥಳೀಯರಿಗೆ ಅನ್ಯಾಯ ಆಗಲು ಬಿಡುದಿಲ್ಲ. ಇಂದು ನಡೆಯುವ ಸಂಸದೆ ನೇತೃತ್ವದಲ್ಲಿ ದಿಶಾ ಮಿಟಿಂಗ್‌ನಲ್ಲಿ ಚರ್ಚಿಸಿ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಬ್ರಹ್ಮಾವರ ತಾಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ, ಜಿಪಂ ಮಾಜಿ ಅಧ್ಯಕ್ಷ ಕೇಶವ ಕುಂದರ್, ಸಾಸ್ತಾನ ಸಂತ ಅಂತೋನಿ ದೇವಾಲಯದ ಧರ್ಮಗುರು ವಂ ಜೋನ್ ವಾಲ್ಟರ್ ಮೆಂಡೋನ್ಸಾ, ಸ್ಥಳೀಯ ಜುಮ್ಮಾ ಮಸೀದಿಯ ಧರ್ಮಗುರು ರಿಜ್ವಾನ್, ಪಾಂಡೇಶ್ವರ ಗ್ರಾಪಂ ಅಧ್ಯಕ್ಷೆ ಕಲ್ಪನಾ ದಿನಕರ್, ಉಪಾಧ್ಯಕ್ಷ ಸಿಲ್ವೆಸ್ಟರ್ ಡಿಸೋಜಾ ಮೊದಲಾದವರು ಇದ್ದರು.

Comments are closed.