ಕರಾವಳಿ

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿ ಆಯ್ಕೆ

Pinterest LinkedIn Tumblr

ಕುಂದಾಪುರ: ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ (ರಿ) ಇದರ ನೂತನ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾ.7 ಭಾನುವಾರ ಕುಂದಾಪುರ ನಗರದಲ್ಲಿರುವ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

ನೂತನ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ವಿಠಲವಾಡಿ, ಕೋಶಾಧಿಕಾರಿ ಶಿವಾನಂದ ಪೂಜಾರಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.

ವಾರ್ಷಿಕ ಮಹಾಸಭೆ ಅಧ್ಯಕ್ಷತೆಯನ್ನು ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ಬಿಲ್ಲವ ವಹಿಸಿದ್ದು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮಂಜು ಬಿಲ್ಲವ ಸ್ವಾಗತಿಸಿ, ನಿಕಟಪೂರ್ವ ಕೋಶಾಧಿಕಾರಿ ಟಿ.ಕೆ. ಕೋಟ್ಯಾನ್ ವಂದಿಸಿದರು‌.

ನೂತನ ಅಧ್ಯಕ್ಷ ಅಶೋಕ್ ಪೂಜಾರಿ…
ಕರಾವಳಿ ಭಾಗದಲ್ಲಿ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿರುವ ಅಶೋಕ್ ಪೂಜಾರಿ ಸಹಕಾರಿ ವ್ಯವಸ್ಥೆ, ಸಂಘಟನಾತ್ಮಕವಾಗಿ ಗುರುತಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡವರು. ಈ ಹಿಂದೆ ಕುಂದಾಪುರ ತಾ.ಪಂ ಸದಸ್ಯರಾಗಿದ್ದ ಅವರು ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸತತ 17 ವರ್ಷದಿಂದ ನಿರ್ದೇಶಕರಾಗಿ, ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷರಾಗಿದ್ದವರು. ಬೀಜಾಡಿ ಮೀನುಗಾರರ ಸಹಕಾರಿ ಸಂಘದಲ್ಲಿ ಪ್ರಸ್ತುತ ಸಹ ನಿರ್ದೇಶಕರಾಗಿದ್ದಾರೆ. ಮುಂದಿನ 2 ವರ್ಷದ ಅವಧಿಗೆ ಅವರು ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.