ಕರಾವಳಿ

ಉಡುಪಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಮೂವರ ಬಂಧನ, ಇಬ್ಬರು ಮಹಿಳೆಯರ ರಕ್ಷಣೆ

Pinterest LinkedIn Tumblr

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿದ್ದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಕೆಲ ವರ್ಷದ ಹಿಂದೆ ಕೊಲೆಯಾದ ಭಾಸ್ಕರ್ ಶೆಟ್ಟಿ ಪತ್ನಿ ಮಾಲಿಕತ್ವದ್ದೆನ್ನಲಾದ ಹೊಟೇಲ್ ಇದಾಗಿದ್ದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಶೇಖರ್ ಶೆಟ್ಟಿ, ಜಾನ್ಸನ್ ಅಲ್ಮೇಡಾ ಮತ್ತು ಹರ್ಷಿತ್ ಶೆಟ್ಟಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.