ಕರಾವಳಿ

ಕಾರ್ಕಳದಲ್ಲಿ ನಾಡ ಕೋವಿಯಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಯುವಕನೋರ್ವ ನಾಡಕೋವಿಯಿಂದ ತನಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ವಿಶಾಕ್ ಪೂಜಾರಿ(30) ಎಂದು ಗುರುತಿಸಲಾಗಿದೆ.

(ಸಾಂದರ್ಭಿಕ ಚಿತ್ರ)

ತನ್ನ ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ನಂತರ ಪತ್ತೆಯಾಗಲಿಲ್ಲ. ಈ ಬಗ್ಗೆ ಮನೆಯವರು ಹುಡುಕಾಟ ನಡೆಸಿದಾಗ ತೋಟದಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments are closed.