ಉಡುಪಿ: ಮಂಗಳೂರು ಕ.ರಾ.ರ.ಸಾ.ನಿಗಮದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರಿನಿಂದ ಕಾರವಾರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಮಾರ್ಚ್ 18 ರಿಂದ ಪ್ರಾರಂಭಿಸಲಾಗಿದೆ.
(ಸಾಂದರ್ಭಿಕ ಚಿತ್ರ)
ಮಂಗಳೂರಿನಿಂದ ಸಂಜೆ 4.15 ಕ್ಕೆ ಹೊರಟು ಉಡುಪಿ, ಕುಂದಾಪುರ, ಭಟ್ಕಳ, ಹೊನ್ನಾವರ, ಕುಮಟ, ಅಂಕೋಲ ಮಾರ್ಗವಾಗಿ ರಾತ್ರಿ 9.15 ಕ್ಕೆ ಕಾರವಾರ ತಲುಪಲಿದೆ. ಮರು ಪ್ರಯಾಣದಲ್ಲಿ ಕಾರವಾರದಿಂದ ಮುಂಜಾನೆ 6.45 ಕ್ಕೆ ಹೊರಟು ಬೆಳಗ್ಗೆ 11.45 ಕ್ಕೆ ಮಂಗಳೂರು ತಲುಪಲಿದೆ. ಸಾರ್ವಜನಿಕರು ಸದರಿ ಸಾರಿಗೆಯ ಸದುಪಯೋಗ ಪಡೆದುಕೊಳ್ಳುವಂತೆ ಮಂಗಳೂರು ಕರಾರಸಾಸಂ, ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.