ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಮೂರು ಮಾರಿಗುಡಿಗಳಲ್ಲಿ ಮಾರ್ಚ್ 23 ಮತ್ತು 24 ರಂದು ಸುಗ್ಗಿ ಮಾರಿ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ವ್ಯಾಪ್ತಿಯಲ್ಲಿ ಮಾರ್ಚ್ 23 ರ ಬೆಳಗ್ಗೆ 6 ರಿಂದ ಮಾರ್ಚ್ 24 ರ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಈವರೆಗೆ ನಡೆದ ಸುಗ್ಗಿ ಮಾರಿಪೂಜೆ ದಿನದಂದು ಯಾವುದೇ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಭಂಗ ಪ್ರಕರಣಗಳು ದಾಖಲಾಗದೇ ಇರುವುದರಿಂದ ಹಾಗೂ ಮದ್ಯ ಮಾರಾಟ ಅಂಗಡಿಗಳ ಮಾಲೀಕರು ಡ್ರೈ ಡೇ ಆದೇಶದಲ್ಲಿ ಸಡಿಲಿಕೆ ಮಾಡುವಂತೆ ಕೋರಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.