ಕರಾವಳಿ

ಕಾಪುವಿನಲ್ಲಿ‌ ಆಟವಾಡುತ್ತಲೇ ಕೊನೆಯುಸಿರೆಳೆದ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ

Pinterest LinkedIn Tumblr

ಉಡುಪಿ: ವಾಲಿಬಾಲ್ ಪಂದ್ಯಾಟದ ವೇಳೆ ಕೋರ್ಟ್‌ನ ಸಮೀಪ ಅಭ್ಯಾಸ ನಡೆಸುತ್ತಿದ್ದ ಸಂದರ್ಭ ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಕುಸಿದು ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ‌ ನಡೆದಿದೆ.

ಕುರ್ಕಾಲು ಸುಭಾಸ್ ನಗರ ನಿವಾಸಿ ದೇವು ಯಾನೆ ದೇವರಾಜ್ (33) ಮೃತ ಆಟಗಾರ.

ಶನಿವಾರ ರಾತ್ರಿ ಇನ್ನಂಜೆಯಲ್ಲಿ‌ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಇನ್ನಂಜೆ ಚಾಲೆಂಜರ್ಸ್ ತಂಡದ ಪರವಾಗಿ ಆಟವಾಡುತ್ತಿದ್ದ ದೇವರಾಜ್ ಅವರು ರಾತ್ರಿ 1 ಗಂಟೆಯ ವೇಳೆಗೆ ಆಟವಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಕೂಡ ಅಷ್ಟರಲ್ಲೇ‌ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಅವಿವಾಹಿತರಾಗಿದ್ದ ಅವರು ತಾಯಿ ಮತ್ತು ಐವರು ಸಹೋದರಿಯರನ್ನು ಅಗಲಿದ್ದಾರೆ.

ರಾಜ್ಯ ಮಟ್ಟದ ಹಲವಾರು ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಅವರು ಆರಂಭದಲ್ಲಿ ಕುರ್ಕಾಲು ಸುಭಾಸ್ ನಗರ ತಂಡದ ಆಟಗಾರನಾಗಿ, ಬಳಿಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

 

 

Comments are closed.