ಕರಾವಳಿ

ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ಎಕ್ಸಾಂ ಇಲ್ಲದೆ ಪಾಸ್ ಮಾಡಲು ಸರ್ಕಾರದ ನಿರ್ಧಾರ..?

Pinterest LinkedIn Tumblr

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಒಂಬತ್ತನೆ ತರಗತಿವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಬಾರಿಯೂ ಒಂದರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಹೆಚ್ಚಾಗಿ ಹರಡುತ್ತಿದೆ. ತಜ್ಞರ ಪ್ರಕಾರ ರೂಪಾಂತರಿ ಸೋಂಕು ಇದಾಗಿದ್ದು ಇದರ ಹರಡುವ ವೇಗ ಹೆಚ್ಚಿದೆ.‌ ಸಾವಿನ ಪ್ರಮಾಣ ಕಡಿಮೆ ಇದೆ ಎಂದು ಅವರು ಹೇಳಿದರು.

Comments are closed.