ಕರಾವಳಿ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವೀಡಿಯೋ ಸಂವಾದದಲ್ಲಿ ಉಡುಪಿ ಜಿಲ್ಲಾಧಿಕಾರಿ ಭಾಗಿ

Pinterest LinkedIn Tumblr

ಉಡುಪಿ: ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪಾಸಿಟಿವಿಟಿ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನಡೆಸಿದ ವೀಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭಾಗವಹಿಸಿದ್ದರು.

ಹೆಚ್ಚು ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾಧಿಕಾರಿಗಳು ಇದುವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲಿಸಿದ ಪ್ರಧಾನ ಮಂತ್ರಿಗಳು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವೀಡಿಯೋ ಸಂವಾದದ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

Comments are closed.