ಕರಾವಳಿ

ಅನಗತ್ಯ ಸಂಚರಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಡಿಸಿ ಜಿ.ಜಗದೀಶ್: ಜಿಲ್ಲಾಧ್ಯಂತ ನಡೆದ ಕಾರ್ಯಾಚರಣೆ

Pinterest LinkedIn Tumblr

ಉಡುಪಿ: ರಾಜ್ಯಾದ್ಯಂತ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆ ಲಾಕ್ ಡೌನ್ ಜಾರಿಯಲ್ಲಿದ್ದು ಬೆಳಿಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಕೆಲವರು ಅನಗತ್ಯವಾಗಿ ವಾಹನಗಳಲ್ಲಿ ಓಡಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಸ್ವತಃ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರೇ ಫೀಲ್ಡಿಗಿಳಿದಿದ್ದಾರೆ. ಅಗತ್ಯ ಸಾಮಗ್ರಿಗಳನ್ನು ಮನೆಯ ಸಮೀಪದ ಅಂಗಡಿಗಳಲ್ಲಿಯೇ ಖರೀದಿಸಬೇಕು. ಇಲ್ಲದಿದ್ದರೆ, ವಾಹನ ಸೀಜ್ ಮಾಡುತ್ತೇವೆಂದು ಮಂಗಳವಾರವೇ ಖಡಕ್ ಎಚ್ಚರಿಕೆ ನೀಡಿದ್ದರು.

ಮಲ್ಪೆ ಮುಖ್ಯರಸ್ತೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅನಾವಶ್ಯಕವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು. ಅಲ್ಲದೆ ರಸ್ತೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ಜನರನ್ನು ಚದುರಿಸಿದರು. ಉಡುಪಿ ನಗರದಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ತಿರುಗಾಡುತ್ತಿದ್ದ ವಾಹನಗಳನ್ನು ಸೀಜ್ ಮಾಡಿದರು. ಅಲ್ಲದೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಉಡುಪಿ ಜಿಲ್ಲಾದ್ಯಂತ ಈ ಕಾರ್ಯಾಚರಣೆ ನಡೆದಿದೆ. ಕುಂದಾಪುರ ಉಪವಿಭಾಗದಲ್ಲೂ ಕಾರ್ಯಾಚರಣೆ ಯಶಸ್ವಿಯಾಗಿದೆ.

ಜಿಲ್ಲಾಧಿಕಾರಿಗಳ ಜೊತೆ ಪೊಲೀಸ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.