ಕರಾವಳಿ

ಮನೆಯಲ್ಲಿ ಕ್ವಾರಂಟೈನ್ ವ್ಯವಸ್ಥೆಯಿಲ್ಲದಿರುವವರಿಗೆ ಇ.ಎಸ್.ಐ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ : ಶಾಸಕ ಕಾಮಾತ್ ಪರಿಶೀಲನೆ

Pinterest LinkedIn Tumblr

ಮಂಗಳೂರು : ಅಲ್ಪ ಪ್ರಮಾಣದ ರೋಗ ಲಕ್ಷಣಗಳಿದ್ದು ಮನೆಯಲ್ಲಿ ಕ್ವಾರಂಟೈನ್ ಆಗಲು ವ್ಯವಸ್ಥೆಯಿಲ್ಲದಿರುವ ಕೋವಿಡ್ ಸೋಂಕಿತರಿಗಾಗಿ ಇ.ಎಸ್.ಐ ಆಸ್ಪತ್ರೆಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರಿಗೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜಿಲ್ಲಾಡಳಿತವು ಅಲ್ಪ ಪ್ರಮಾಣದ ರೋಗ ಲಕ್ಷಣಗಳಿದ್ದು ಆರೋಗ್ಯವಾಗಿರುವ ಕೋವಿಡ್ ಸೋಂಕಿತರ ಶುಶ್ರೂಷೆಗಾಗಿ ಇ.ಎಸ್.ಐ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಾಗಿದೆ.‌

ಸದ್ಯ ಕೋವಿಡ್ ಕೇರ್ ಸೆಂಟರ್ ನಲ್ಲಿ 22 ಜನರು ಚಿಕಿತ್ಸೆ ಪಡೆಯುತಿದ್ದಾರೆ. ಒಟ್ಟು 50 ಬೆಡ್ ವ್ಯವಸ್ಥೆ ಮಾಡಲಾಗಿದ್ದು ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ನಿಯಮಿತವಾಗಿ ಔಷಧಗಳು ಹಾಗೂ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತಿದೆ. ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಉತ್ತಮ ಸೇವೆ ನೀಡಲಾಗುತ್ತಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈಗಾಗಲೇ ಸಂಸದ ನಳಿನ್ ಕುಮಾರ್ ಕಟೀಲ್ ಅವರ‌ ಸಹಕಾರದಿಂದ ಎಂ.ಸಿ.ಎಫ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರದಲ್ಲೇ ಆಕ್ಸಿಜನ್ ಪ್ಲಾಂಟ್ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ‌ಶೆಟ್ಟಿ,‌ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮುಖಂಡರಾದ ಸಂಜಯ್ ಪ್ರಭು, ಆಸ್ಪತ್ರೆಯ ವೈಧ್ಯಾಧಿಕಾರಿ ಶೈಲಜಾ, ಡಾ. ಸಚ್ಚಿದಾನಂದ ರೈ ಹಾಗೂ ಇತರರು ಉಪಸ್ಥಿತರಿದ್ದರು

Comments are closed.